ವಿಧಾನಪರಿಷತ್ ನ 25 ಸ್ಥಾನಗಳ ಚುನಾವಣೆಗೆ ಡಿ. 10ರಂದು ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 09. ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣಾ ಆಯೋಗವು ಡಿಸೆಂಬರ್‌ 10 ರಂದು ದಿನಾಂಕ ಘೋಷಣೆ ಮಾಡಿದೆ.


ಕರ್ನಾಟಕ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದ 25 ಸದಸ್ಯರ ಅವಧಿಯು ಇದೇ ಜನವರಿ ತಿಂಗಳಲ್ಲಿ ಅಂತ್ಯವಾಗಲಿದ್ದು, ಈ ಹಿನ್ನೆಲೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಡಿಸೆಂಬರ್‌ 10ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.

Also Read  ವಿಟ್ಲ: ದೇವಸ್ಥಾನದಲ್ಲಿ ಕಳವು ಪ್ರಕರಣ – ಆರೋಪಿಯ ಬಂಧನ ➤ 3 ವರ್ಷಗಳಲ್ಲಿಆರೋಪಿಯ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 13 ಪ್ರಕರಣ ದಾಖಲು

error: Content is protected !!
Scroll to Top