ಆಹಾರ ಸಚಿವರ ಜಿಲ್ಲೆಯಲ್ಲಿ ಹಂದಿಗಳ ಪಾಲಾಗುತ್ತಿರುವ ಅನ್ನಭಾಗ್ಯ ಅಕ್ಕಿ..! ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಅಥಣಿ, ನ. 10. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ ಕತ್ತಿ ಅವರ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಯೋಜನೆಯ ಅಕ್ಕಿಯು ಹಂದಿ ಪಾಲಾಗಿದ್ದು, ಇದನ್ನೇ ಪಡಿತರದಾರರಿಗೆ ಸರಬರಾಜು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಅಥಣಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿಯನ್ನು ಕಟ್ಟಡದ ಹೊರಭಾಗದಲ್ಲಿ ಇಟ್ಟು, ಸರಿಯಾದ ನಿರ್ವಹಣೆಯಿಲ್ಲದ ಕಾರಣ ಅಕ್ಕಿಯನ್ನು ಹಂದಿಗಳು ತಿಂದು ನಾಶ ಮಾಡುತ್ತಿವೆ. ಅಲ್ಲದೇ ಅದರಿಂದ ಉಳಿದ ಅಕ್ಕಿಯನ್ನು ಪಡಿತರದಾರರಿಗೆ ನೀಡುತ್ತಿದ್ದು, ಇದರಿಂದ ಜನರು ಅಕ್ರೋಶಗೊಂಡಿದ್ದಾರೆ. ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕುರಿತು ಅಥಣಿ ತಾಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಜನರ ಆರೋಗ್ಯದ ಮೇಲೆ ಕಾಳಜಿ ಇಲ್ಲ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೇಕಾಬಿಟ್ಟಿಯಾಗಿ ಜಾರಿ ಮಾಡಲಾಗುತ್ತಿದೆ. ಇಂಥ ಅಧಿಕಾರಿಗಳನ್ನು ತಕ್ಷಣವೇ ವಜಾ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್‌ ಕತ್ತಿ ಅವರ ವಿರುದ್ದ ಕಿಡಿಕಾರಿದ್ದಾರೆ.

 

error: Content is protected !!

Join the Group

Join WhatsApp Group