ಪುತ್ತೂರು: ಸ್ಕೂಟರ್ – ಲಾರಿ ನಡುವೆ ಢಿಕ್ಕಿ ➤ ಗಾಯಗೊಂಡಿದ್ದ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಲಾರಿ ಮತ್ತು ಸ್ಕೂಟರ್ ನಡುವೆ ಮಂಗಳವಾರದಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ವರದಿಯಾಗಿದೆ.


ಮೃತರನ್ನು ವಸಂತ ರೈ ಬಳ್ಳಮಜಲು ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ಬಳ್ಳಮಜಲು ಎಂಬವರೊಂದಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಹಾಗೂ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ವಸಂತ ರೈ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು

error: Content is protected !!
Scroll to Top