ಉಪ್ಪಿನಂಗಡಿ: ಟ್ರಾಕ್ಟರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಗಂಭೀರ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 10. ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೇಗೇಟು ಎಂಬಲ್ಲಿ ಇಂದು ನಡೆದಿದೆ.







ಗಾಯಗೊಂಡವರನ್ನು ಕಾಣಿಯೂರು ಬೆಂಗಾಯ ನಿವಾಸಿ ಭುವನೇಶ್ ಎಂದು ಗುರುತಿಸಲಾಗಿದೆ. ಕಡಬ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ವಿರುದ್ದ ದಿಕ್ಕಿನಿಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top