ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದು, ರೋಗಿಗಳಿಗೆ ತೊಂದರೆಯಾಗಲಿದೆ.

ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕ್ಲಿನಿಕ್‍ನಿಂದ ಹಿಡಿದು ಕಾರ್ಪೊರೇಟ್ ಆಸ್ಪತ್ರೆಗಳು ಇಂದು ಬಂದ್ ಆಗಲಿವೆ. ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಲಿದೆ. ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ ಕೇಸ್ ಮಾತ್ರ ಆಟೆಂಡ್ ಮಾಡೋದಾಗಿ ವೈದ್ಯರು ಹೇಳಿದ್ದಾರೆ.

ಚಿಕಿತ್ಸೆ ವಿಫಲವಾದ್ರೆ ವೈದ್ಯರನ್ನು ಜೈಲಿಗಟ್ಟುವ ಕಾಯ್ದೆ ಹಾಗೂ ದಂಡ ಪ್ರಯೋಗವನ್ನು ವಿರೋಧಿಸಿ, ಜಿಲ್ಲಾಮಟ್ಟದಲ್ಲಿ ಮತ್ತೆ ಕುಂದು ಕೊರತೆ ಪರಿಹಾರ ಸಮಿತಿ ಸ್ಥಾಪನೆಯನ್ನು ವಿರೋಧಿಸಿ, ಚಿಕಿತ್ಸಾ ದರವನ್ನು ಸರ್ಕಾರವೇ ನಿಗಧಿ ಮಾಡುವ ನಿರ್ಧಾರ – ಈ ಎಲ್ಲಾ ನೀತಿಗಳ ವಿರುದ್ಧ ನಾವು ಮುಷ್ಕರ ಮಾಡುತ್ತೇವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಡಾ. ರವೀಂದ್ರ ತಿಳಿಸಿದ್ದಾರೆ.

Also Read  ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್

ವೈದ್ಯರ ಪ್ರತಿಭಟನೆ ಕುರಿತಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೈದ್ಯರು ಮುಷ್ಕರ ಮಾಡೋದು ಸರಿಯಲ್ಲ. ಈಗಾಗಲೇ ಅವರ ಜೊತೆ ಮಾತನಾಡಲಾಗಿದ್ದು, ಅವಶ್ಯಕತೆ ಇದ್ದರೆ ಮತ್ತೊಂದು ಸಾರಿ ವೈದ್ಯರ ಜೊತೆ ಮಾತನಾಡುತ್ತೇನೆ. ಬಡವರಿಗೆ ಅನುಕೂಲವಾಗಲಿ ಎಂದು ಬಿಲ್ ವ್ಯವಸ್ಥೆಯನ್ನು ತರಲಾಗುತ್ತಿದೆ ಎಂದು ಹೇಳಿದ್ದಾರೆ.

error: Content is protected !!
Scroll to Top