ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ ಆರೋಪಿಯ ಬಂಧನವಾಗದಿದ್ದಲ್ಲಿ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.

Also Read  ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

error: Content is protected !!
Scroll to Top