ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

error: Content is protected !!
Scroll to Top