ಟಯರ್ ಸ್ಫೋಟಗೊಂಡು ಕಾರು ಪಲ್ಟಿ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮುಲ್ಕಿ, ನ. 14. ಟಯರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಪವಾಡಸದೃಶ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಾವಂಜೆ ಎಂಬಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಪಾವಂಜೆ ಜಂಕ್ಷನ್ ತಲುಪುತ್ತಿದ್ದಂತೆಯೇ ಕಾರಿನ ಟಯರ್ ಸ್ಫೋಟಗೊಂಡಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿ ಬದಿ ನಿಲ್ಲಿಸಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top