(ನ್ಯೂಸ್ ಕಡಬ) newskadaba.com ವಿಟ್ಲ, ನ. 14. ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಹೆದ್ದಾರಿ ಬದಿಯ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದು, ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ.