ಮಂಗಳೂರು: ಮತ್ತೆ ಮುಂದುವರಿದ ನೈತಿಕ ಪೊಲೀಸ್ ಗಿರಿ ➤ ಆರು ಜನರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿ ಅವರ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ.


ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಅಪಾರ್ಟ್ ಮೆಂಟ್ ಒಂದನ್ನು ಖಾಲಿ ಮಾಡಿ, ಲಗೇಜ್ ಶಿಫ್ಟ್ ಮಾಡಿ ಯುವಕನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ಹಿಂಬಾಲಿಸಿದ 5-6 ಜನರ ಗುಂಪೊಂದು ಯುವಕ -ಯುವತಿಯನ್ನು ತಡೆದು ವಿಚಾರಿಸಿ, ಅವರ ಮೂಲವನ್ನು ತಿಳಿದುಕೊಂಡು, ಯುವಕನನ್ನು ನಿಂದಿಸಿ ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಯುವಕ ಹಲ್ಲೆ ಮಾಡಿದವರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿದ ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ನಾಗರಹೊಳೆಯಲ್ಲಿ 104 ರಣಹದ್ದುಗಳು ಪತ್ತೆ

error: Content is protected !!
Scroll to Top