ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನ ಭೀಕರ ಹತ್ಯೆ..!

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್, ನ. 16. ಪತ್ನಿ ಎದುರಲ್ಲೇ ಆರೆಸ್ಸೆಸ್ ಕಾರ್ಯಕರ್ತನೊಬ್ಬನನ್ನು ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲಪ್ಪುಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದವರನ್ನು ಸಂಜಿತ್ (27) ಎಂದು ಗುರುತಿಸಲಾಗಿದೆ. ಈತ ಬೈಕಿನಲ್ಲಿ ಪತ್ನಿಯನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳ ತಂಡವೊಂದು ಕಿನಾಶ್ಯೇರಿ ಎಂಬಲ್ಲಿ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸಂಜಿತ್ ಅವರನ್ನು ಕಾರಿನಿಂದ ಇಳಿದ ದುಷ್ಕರ್ಮಿಗಳು ಪತ್ನಿ ಎದುರಲ್ಲೇ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ. ಕೂಡಲೇ ಸಂಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಮೃತಪಟ್ಟಿದ್ದರು. ಕೆಲವು ದಿನಗಳ ಹಿಂದೆ ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಕೊಲೆ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಎಸ್ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರು ಈ ಕೊಲೆಯ ಹಿಂದೆ ಇದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Also Read  10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?!

error: Content is protected !!
Scroll to Top