ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾಣಿ, ನ. 16. ಇಲ್ಲಿನ ಸಮೀಪದ ಹಳೀರ ಎಂಬಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆಂಬ ಹಿನ್ನೆಲೆ ಇಪ್ಪತ್ತರಿಂದ ಮೂವತ್ತು ಜನರ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸೂರಿಕುಮೇರು ನಿವಾಸಿ ಹನೀಫ್(43) ಹಾಗೂ ಹಳೀರಾ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ನ. 12ರಂದು ಸ್ವಿಫ್ಟ್ ಹಾಗೂ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಸೇರಿದ್ದವರ ನಡುವೆ ಮಾತಿಗೆ ಮಾತು ಬೆಳೆದು, ಎರಡೂ ತಂಡದವರು ಪರಸ್ಪರ ಹಲ್ಲೆಗೆ ಮುಂದಾಗಿದ್ದರು. ಪೊಲೀಸರು ಕಾರಿನ ಚಾಲಕರನ್ನು ಮಾತನಾಡಿಸಿ ಸಮಾಧಾನ ಪಡಿಸುವ ಸಂದರ್ಭ, ಪೊಲೀಸರ ಮಾತು ಕೇಳದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಕುರಿತು ಸ್ವಯಂ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

Also Read  ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ

error: Content is protected !!
Scroll to Top