ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ & ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯ ➤ ಸಿರಿಬಾಗಿಲು- ಕೊಂಬಾರು ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು- ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18ರಂದು ಗುರುವಾರ ಬೆಳಗ್ಗೆ 11:00 ಗಂಟೆಗೆ ಕೊಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೊಂಬಾರು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿಲಿಕಜೆ-ಗುಂಡ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗೇರಡ್ಕ, ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಲಾಗುವುದು. ದ.ಕ. ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿರುವರು. ಕೆಐಒಸಿಎಲ್ ಸಂಸ್ಥೆಯ ಜನರಲ್ ಮ್ಯಾನೇಜರ್ ರಾಮಕೃಷ್ಣ, ಸೀನಿಯರ್ ಮ್ಯಾನೇಜರ್ ಮುರುಗೇಶ್, ಕಡಬ ತಹಶೀಲ್ದಾರ್ ಅನಂತ ಶಂಕರ್ ಬಿ, ಕಡಬ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನೇತ್ರ ಪರೀಕ್ಷಾ ಶಿಬಿರ

error: Content is protected !!
Scroll to Top