ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ “ಕರ್ನಾಟಕ ರತ್ನ” ಪ್ರಶಸ್ತಿ ➤ ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 16. ಇತ್ತೀಚೆಗೆ ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ “ಕರ್ನಾಟಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪುನೀತ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದರು. ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ, ರಾಜ್ ಕುಮಾರ್ ಕುಟುಂಬ, ಚಿತ್ರರಂಗದ ಆಹ್ವಾನಿತ ಗಣ್ಯರು ಸೇರಿದಂತೆ ಸೇರಿ ಹಲವರು ಭಾಗವಹಿಸಿದ್ದರು.

Also Read  ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

error: Content is protected !!
Scroll to Top