ಬಂಟ್ವಾಳ: ಬೈಕ್ ಲಾರಿ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತ ಸವಾರನನ್ನು ಮಂಗಳೂರು ನಿವಾಸಿ ಗಣೇಶ್(36) ಎಂದು ಗುರುತಿಸಲಾಗಿದೆ. ಗಣೇಶ್ ಅವರು ಬೈಕ್ ನಲ್ಲಿ ಮೆಲ್ಕಾರ್ ನಿಂದ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿಯು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಸುಕಿನ ವೇಳೆ ಮೃತಪಟ್ಟಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top