ಪುನೀತ್ ಗೆ ‘ಕರ್ನಾಟಕ ರತ್ನ’ದ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಚಿರಸ್ಥಾಯಿ ಆಗಿಸಬೇಕು ಎಂಬುವುದು ಕರ್ನಾಟಕ ಸರ್ಕಾರದ ಅಭಿಲಾಷೆಯಾಗಿದ್ದು, ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಲಾಗುವುದು. ಇದರ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು ಮಾಡುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಯಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಪುನೀತ್ ರಾಜ್ ಕುಮಾರ್ ಅವರ ಸಮಾಧಿಯನ್ನು ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಅವರ ಸಮಾಧಿಯ ಹಾಗೆಯೇ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.

Also Read  ನಾಳೆ (ಜ. 06): ಜಿಲ್ಲಾ ಗ್ರಾಮೀಣ ಮಟ್ಟದ ಕ್ರೀಡಾಕೂಟ

error: Content is protected !!
Scroll to Top