ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ-ಅದಿ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಹಿರಿಯ ವಿದ್ವಾಂಸ, ಮೌಲಾನಾ ಶಾಫಿ ಸಅದಿ ಅವರು ನೂತನ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಡಾ.ಮುಹಮ್ಮದ್ ಯೂಸುಫ್ ರವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಛೇರಿಯಲ್ಲಿ ಚುನಾವಣೆ ನಡೆದಿತ್ತು. ಇದರಲ್ಲಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಶಾಫಿ ಸಅದಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡು ಬಾರಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಇವರು, ಕರ್ನಾಟಕ ರಾಜ್ಯ ಸರಕಾರದಿಂದ ಕಳೆದ ಎರಡು ಅವಧಿಗೆ ರಾಜ್ಯ ವಕ್ಫ್ ಬೋರ್ಡ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು. ಸದ್ಯ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

Also Read  ಕವಿತಾ ಲಂಕೇಶ್ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ

error: Content is protected !!
Scroll to Top