ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಷಷ್ಠೀ ಜಾತ್ರಾ ಮಹೋತ್ಸವ ಪೂರ್ವಭಾವಿ‌ ಸಭೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 17. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಪುತ್ತೂರು ಸಹಾಯ ಆಯುಕ್ತರಾದ ಯತೀಶ್ ಉಳ್ಳಾಲ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಇದರನ್ವಯ ನ. 30ರಂದು ಮೂಲ ಮೃತ್ತಿಕೆ ತೆಗೆಯುವ ಕಾರ್ಯಕ್ರಮ, ಡಿ.01 ರಂದು ಕೊಪ್ಪರಿಗೆ ಏರುವುದು, ಡಿ. 03ರಂದು ಲಕ್ಷ ದೀಪೋತ್ಸವ, ಡಿ. 07ರಂದು ಚೌತಿ, ಡಿ. 08ರಂದು ಪಂಚಮಿ, ಡಿ. 09ರಂದು ಮಹಾ ರಥೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯ ನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿ ಡಾ| ನಿಂಗಯ್ಯ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ಕುಮಾರ್ ದರ್ಬೆ, ಶ್ರೀವತ್ಸ, ಪಿ.ಜಿ.ಎಸ್.ಎನ್ ಪ್ರಸಾದ್, ವನಜಾ ಭಟ್, ಶೋಭಾ ಗಿರಿಧರ್, ಲೋಕೇಶ್, ಸಬ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾದ ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ಮರ್ಧಾಳ, ಮನೋಜ್ ಸುಬ್ರಹ್ಮಣ್ಯ, ಡಾ| ಚಂದ್ರಶೇಖರ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಯು.ಡಿ ಶೇಖರ್ ಉಪಸ್ಥಿತರಿದ್ದರು.

Also Read  ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ...!

error: Content is protected !!
Scroll to Top