ರವಿ ಪೂಜಾರಿ ಹೆಸರಿನಲ್ಲಿ ಬ್ಲ್ಯಾಕ್ ಮೇಲ್..! ➤ ಪ್ರಕರಣವನ್ನು ವಿಲೇವಾರಿ ಮಾಡಿದ ಬಂಟ್ವಾಳ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ವಿಟ್ಲದ ಕೃಷಿಕರೋರ್ವರಿಗೆ ರವಿ ಪೂಜಾರಿ ಹೆಸರಿನಲ್ಲಿ 25 ಲಕ್ಷ ರೂ. ಬೇಡಿಕೆಯಿಟ್ಟು, ಕೊಡದಿದ್ದಲ್ಲಿ ಜೀವಬೆದರಿಕೆ ಒಡ್ಡಿರುವ ಪ್ರಕರಣವನ್ನು ಬಂಟ್ವಾಳ ಜಿಎಂಎಫ್ ಸಿ ನ್ಯಾಯಾಲಯವು ವಜಾಗೊಳಿಸಿದೆ.

ವಿಟ್ಲ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ವೆಂಕಟರಮಣ ಭಟ್ ಎಂಬವರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆದರೆ ದೂರುದಾರರು ಪ್ರಕರಣವನ್ನು ಮುಂದುವರಿಸದೇ ಇರಲು ನಿರ್ಧರಿಸಿದ ಕಾರಣ ಪ್ರಕರಣವನ್ನು ಖುಲಾಸೆಗೊಳಿಸಲಾಗಿದೆ.\

Also Read  24 ಗಂಟೆಯೊಳಗೆ ಕರಾವಳಿಯ ಕೆಲವಡೆ ಬಿಸಿಗಾಳಿ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ

error: Content is protected !!
Scroll to Top