ದ್ವಿತೀಯ ಪಿಯು ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡುವ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದೇ ತಿಂಗಳ 29ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಪರೀಕ್ಷೆಯನ್ನು ಯಾವುದೇ ಪೂರ್ವಭಾವಿ ಸಿದ್ದತೆಗಳನ್ನು ಕೈಗೊಳ್ಳದೇ ಆತುರದಲ್ಲಿ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಹಿನ್ನೆಲೆ ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿದ್ದು, ಮುಂದೂಡುವ ಸಾಧ್ಯತೆಗಳಿವೆ. ಈ ಬಗ್ಗೆ ಗುರುವಾರದಂದು ಸ್ಪಷ್ಟ ನಿರ್ಧಾರ ಕೈಗೊಂಡು ಸುತ್ತೋಲೆ ಹೊರಡಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Also Read  ಮೈಸೂರು ದಸರಾ'ದಲ್ಲಿ ಏರ್ ಶೋ ಆಯೋಜನೆಗೆ ಸಿಎಂ ಮನವಿ

error: Content is protected !!
Scroll to Top