ಉಪ್ಪಿನಂಗಡಿ: ಫಾಸ್ಟ್ ಫುಡ್ ಮಾಲಕನಿಗೆ ದುಷ್ಕರ್ಮಿಗಳಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 18. ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಫಾಸ್ಟ್ ಫುಡ್ ಅಂಗಡಿಯೊಂದರ ಮಾಲೀಕನಿಗೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ರಾತ್ರಿ ನಡೆದಿದೆ.

ಹಲ್ಲೆಗೊಳಗಾದವರನ್ನು ಆದರ್ಶ ನಗರದ ಫಾಸ್ಟ್ ಫುಡ್ ಅಂಗಡಿ ಮಾಲಕ ಬಾತೀಶ್ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ಬುಧವಾರ ರಾತ್ರಿ ಇನೋವಾ ಹಾಗೂ ರಿಡ್ಜ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಣ್ಣ ಪುಟ್ಟ ಕಾರಣಕ್ಕೆ ಬಾತೀಶ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರಾವಳಿಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ

error: Content is protected !!
Scroll to Top