ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೋರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ನಂದಕುಮಾರ್ (54) ಎಂದು ಗುರುತಿಸಲಾಗಿದೆ. ತಕ್ಷಣವೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್‌ ಗುಟ್ಟಹಳ್ಳಿ ನಿವಾಸಿಯಾದ ನಂದಕುಮಾರ್‌ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ ಒದಗಿಸಿಲ್ಲ ಎಂದು ಆರೋಪಿಸಿ, ವಿಧಾನ ಸೌಧದಲ್ಲಾದರೂ ನ್ಯಾಯ ಸಿಗಬಹುದು ಎಂದು ಯೋಚಿಸಿ ಬಂದ ನಂದಕುಮಾರ್ ಕೊಠಡಿಯೊಳಗೆ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ‌ ಯತ್ನಿಸಿದ್ದಾರೆ ಎನ್ನಲಾಗಿದೆ.

Also Read  ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು 

error: Content is protected !!
Scroll to Top