ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 18. ಅಕ್ರಮವಾಗಿ ಕೇರಳಕ್ಕೆ ಎರಡು ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಾಸರಗೋಡು ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಗಂಧದ ಎಣ್ಣೆ ಸಾಗಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ವಿಚಾರಣೆಗೆ ಹಾಜರಾಗದೇ ಸುಮಾರು‌ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಕಣ್ಣೂರಿನಲ್ಲಿ ಪತ್ತೆ ಹಚ್ಚಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ

error: Content is protected !!
Scroll to Top