ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆ ಡಿ.13ರಿಂದ ಡಿ.24ರ ವರೆಗೆ ➤ ಶಿಕ್ಷಣ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನವೆಂಬರ್ 29ರಿಂದ ನಿಗದಿಪಡಿಸಲಾಗಿದ್ದ ಅರ್ಧ ವಾರ್ಷಿಕ ಪರೀಕ್ಷೆಯನ್ನು ಸದ್ಯ ಮುಂದೂಡಲಾಗಿದ್ದು, ಇದೀಗ ಶಿಕ್ಷಣ ಇಲಾಖೆಯು ಹೊಸ ದಿನಾಂಕವನ್ನು ಪ್ರಕಟಿಸಿದೆ.

ಹೊಸ ನಿಗದಿಯಂತೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳು ಡಿಸೆಂಬರ್ 13 ರಿಂದ ಡಿಸೆಂಬರ್ 24ರ ನಡುವೆ ನಡೆಯಲಿವೆ. ಪರೀಕ್ಷೆಗಳು ರಾಜ್ಯದಾದ್ಯಂತ ನಿಯೋಜಿತ ಕೇಂದ್ರಗಳಲ್ಲಿ ನಡೆಯಲಿವೆ. ನಿಗದಿತ ವರದಿ ಮಾಡುವ ಸಮಯಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಗಳನ್ನ ತಲುಪಬೇಕು. ಪರೀಕ್ಷೆಗಳನ್ನ ಕೋವಿಡ್ ನಡುವೆ ನಡೆಸುವುದರಿಂದ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಹಾಗೆ, ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನ ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ಕೇಳಿಬಂದಿತ್ತು. ಉಪನ್ಯಾಸಕರು ಕೂಡಾ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

Also Read  ಹಿರಿಯ ನಟ ಅತುಲ್ ಪರ್ಚುರೆ ನಿಧನ

error: Content is protected !!
Scroll to Top