ಉಪ್ಪಿನಂಗಡಿ: ಕಾಲೇಜು ಆವರಣದಲ್ಲಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 19. ಕಾಲೇಜೊಂದರ ಭಿನ್ನಕೋಮಿಗೆ ಸೇರಿದ ವಿದ್ಯಾರ್ಥಿಗಳ ಎರಡು ತಂಡಗಳು ಕಾಲೇಜು ಅವರಣದಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಕಾಲೇಜಿನ ವಿದ್ಯಾರ್ಥಿನಿಯೋರ್ವಳ ವಿಚಾರವಾಗಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಹೊಡೆದಾಟದಲ್ಲಿ ಒಂದು ತಂಡದ ಮೂವರು ವಿದ್ಯಾರ್ಥಿಗಳು ಮತ್ತು ಇನ್ನೊಂದು ತಂಡದ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group