(ನ್ಯೂಸ್ ಕಡಬ) newskadaba.com ನವದೆಹಲಿ, ನ. 19. ಸರಕಾರ ಜಾಎಇಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ ರೈತರು ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿದ್ದು, ಇದೀಗ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಮೂರು ಕೃಷಿ ಕಾಯ್ದೆಗಳ ಮೂಲಕ ಸರ್ಕಾರವು ಸಣ್ಣ ರೈತರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು, ಅವರು ಬೆಳೆಯುವ ಬೆಳೆಗೆ ಒಳ್ಳೆಯ ಬೆಲೆ ಸಿಗುವಂತೆ ಮಾಡಲು ಉದ್ದೇಶಿಸಲಾಗಿತ್ತು. ಹಲವು ಸರ್ಕಾರಗಳು ಈ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಆಲೋಚಿಸುತ್ತಿದ್ದು, ಆದರೆ ನಾವು ಕಾಯ್ದೆಯನ್ನು ಜಾರಿಗೆ ತಂದೆವು. ಕೋಟ್ಯಂತರ ರೈತರು ಈ ಕಾಯ್ದೆಯನ್ನು ಸ್ವಾಗತಿಸಿದರು ಹಾಗೂ ಬೆಂಬಲ ನೀಡಿದರು ಎಂದು ತಿಳಿಸಿದ್ದಾರೆ. ಈ ಕೃಷಿ ಕಾಯ್ದೆಗಳಿಂದ ಆಗುವ ಅನುಕೂಲಗಳ ಬಗ್ಗೆ ಒಂದು ಭಾಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ. ಹಲವು ವಿಜ್ಞಾನಿಗಳು ಮಾಧ್ಯಮಗಳ ಮೂಲಕ ರೈತರಿಗೆ ವಿವರಿಸಲು ಪ್ರಯತ್ನಿಸಿದರಾದರೂ, ಒಂದು ಭಾಗದ ರೈತರಿಗೆ ಅದನ್ನು ಅರ್ಥ ಮಾಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದರು.