ಹೆದ್ದಾರಿ ಬದಿಗೆ ವಾಲಿನಿಂತ ಗ್ಯಾಸ್ ಟ್ಯಾಂಕರ್ ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಚಾಲಕ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಒಂದು ಹೆದ್ದಾರಿ ಬದಿಗೆ ವಾಲಿನಿಂತ ಪರಿಣಾಮ ಕೆಲಕಾರ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆ ಸಂಚರಿಸುತ್ತಿದ್ದ ಟ್ಯಾಂಕರ್ ಮುಂಜಾನೆ ವೇಳೆ ಪಾಣೆಮಂಗಳೂರು ಹೆದ್ದಾರಿ ಸಮೀಪ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿನಿಂತಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಟ್ರಾಫಿಕ್ ಜಾಂ ನಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಯಿತು. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ಕ್ರೇನ್ ಮೂಲಕ ಟ್ಯಾಂಕರ್ ನ್ನು ಯಥಾಸ್ಥಿತಿಗೆ ತರುವಲ್ಲಿ ಯಶಸ್ವಿಯಾದರು.

Also Read  ಪುತ್ತೂರು: ಬೃಹತ್ ದಿಮ್ಮಿಗಳ ಭಾರಕ್ಕೆ ರಸ್ತೆ ಬಿಟ್ಟ ಲಾರಿ

error: Content is protected !!
Scroll to Top