ಮಂಗಳೂರು ಏರ್ಪೋರ್ಟ್ ನಲ್ಲಿ 34.32 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ



(ನ್ಯೂಸ್ ಕಡಬ) newskadaba.com ಮಂಗಳೂರು, ನ. 19. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಓರ್ವ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ.







ಶುಕ್ರವಾರದಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ರಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಮೌಲ್ಯ 34,32,240 ರೂಪಾಯಿ ಮೌಲ್ಯದ 681 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top