ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸ್ಫೋಟಕ ವಸ್ತುಗಳು ಪತ್ತೆ

(ನ್ಯೂಸ್ ಕಡಬ) newskadaba.com ಚಾಮರಾಜಮಗರ, ನ. 19. ಹಳ್ಳವೊಂದರ ಪೈಪ್ ನಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸ್ಪೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ತಾಲೂಕಿನ ವಿ.ಸಿ ಹೊಸೂರು ಗ್ರಾಮದ ಸಮೀಪ ನಡೆದಿದೆ.

ಘಟನಾ ಸ್ಥಳದಲ್ಲಿ ಸುಮಾರು 120 ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಲಾಗಿದೆ. ಇದು ತಮಿಳುನಾಡಿನ ತಿರುಚಿ ಜಿಲ್ಲೆಯಲ್ಲಿ ತಯಾರಾದ ಸ್ಫೋಟಕವಾಗಿದ್ದು, ಅಕ್ರಮ ಗಣಿಗಾರಿಕೆ ನಡೆಸುವವರು ತಂದಿಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉದ್ಯಮಿಗೆ ವಂಚನೆ ಪ್ರಕರಣ - ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

error: Content is protected !!
Scroll to Top