(ನ್ಯೂಸ್ ಕಡಬ) newskadaba.com ಪುತ್ತೂರು, ನ. 19. ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳ ಹಾಗೂ ಅಪರಿಚಿತ ಯುವಕ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಆಗಮಿಸಿ ಠಾಣೆಗೆ ಕರೆದೊಯ್ದು ಘಟನೆ ಪುತ್ತೂರಿನಲ್ಲಿ ಶುಕ್ರವಾರದಂದು ನಡೆದಿದೆ.

ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರು ಹಿಂಬಾಲಿಸಿದ್ದನ್ನು, ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳಿಗೆ ತಿಳಿಸಿದ್ದು, ವಿದ್ಯಾರ್ಥಿಗಳು ಬಂದ ಅಪರಿಚಿತರನ್ನು ವಿಚಾರಿಸುತ್ತಿದ್ದ ವೇಳೆ ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಕೈಮೀರುವ ಮುನ್ನವೇ ಪರಿಸ್ಥಿತಿಯನ್ನು ಹತೋಟಿಗೆ ತಂದು ಹಿಂಬಾಲಿಸಿಕೊಂಡು ಬಂದ ಯುವಕರನ್ನು ವಿಚಾರಣೆಗಾಗಿ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.











