ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಹಿಳೆಯೊರ್ವರು ಸೇತುವೆಯಿಂದ ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಕೂಡಲೇ ಕಾರ್ಯಪ್ರವೃತ್ತರಾದ ಮುಳುಗುತಜ್ಞರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿ ಬಂದರೂ, ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Also Read  Top Data Room Review

error: Content is protected !!
Scroll to Top