(ನ್ಯೂಸ್ ಕಡಬ) newskadaba.com ಮಂಗಳೂರು, ನ. 20. ವಿಧಾನ ಪರಿಷತ್ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಅಲ್ಲದೇ, ಈ ಹಿಂದೆಯೂ ಕೂಡಾ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದೆ.