ವಿಧಾನಪರಿಷತ್ ಚುನಾವಣೆ ➤ ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ್ ಪೂಜಾರಿ

(‌ನ್ಯೂಸ್ ಕಡಬ) newskadaba.com ಮಂಗಳೂರು, ನ. 20. ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರದಂದು ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಇತರ ಮುಖಂಡರು ಜೊತೆಗಿದ್ದರು.

Scroll to Top