(ನ್ಯೂಸ್ ಕಡಬ) newskadaba.com ಕಡಬ, ನ. 21. ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ ಎಸ್ ಎಸ್ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಗೋವಿಂದ ಎನ್. ಎಸ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, “ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯಲು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ರಚನಾತ್ಮಕ ಚಟುವಟಿಕೆಗಳು ಪೂರಕವಾಗಿದೆ, ಪ್ರಾಮಾಣಿಕತೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ಕರ್ತವ್ಯ ನಿರ್ವಹಿಸಿದಾಗ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯವೆಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ.ಅರುಣ್ ವಿಲ್ಸನ್ ಲೋಬೋ ಅವರು ಮಾತನಾಡಿ, ಭವಿಷ್ಯದ ಉತ್ತಮ ಪ್ರಜೆಗಳು ರೂಪುಗೊಳ್ಳಲು ಶಿಕ್ಷಣ ಸಂಸ್ಥೆಗಳ ಶ್ರಮದೊಂದಿಗೆ ವಿದ್ಯಾರ್ಥಿಗಳ ಸಮರ್ಪಣಾ ಮನೋಭಾವ ಹಾಗೂ ಶಿಸ್ತು ಅಗತ್ಯವಾಗಿದೆ; ವಿದ್ಯಾರ್ಥಿ ಸಂಘ ಈ ದಿಸೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಪವಿತ್ರಾ ಬಿ.ಕೆ ,ಶ್ರೇಯಸ್, ಅಬ್ದುಲ್ ರಹಿಮಾನ್ ಶೇರಿನ್, ಮಹಮ್ಮದ್ ಶಾನ್, ಸತ್ಯನಾರಾಯಣ ನಾಯಕ್, ಮಹಮದ್ ಶಕೀರ್ ಹಾಗೂ ಪ್ರೌಢಶಾಲಾ ವಿಭಾಗದ ಪ್ರತಿನಿಧಿಗಳಾದ ಮೊಹಮದ್ ಆಸಿಫ್, ಮನ್ವಿತ್ .ಕೆ, ಹಪೀಝ್, ನಿಶ್ಮಿತಾ, ಜ್ಯೋತಿಕಾ ಯು. ವಿ ಹಾಗೂ ಪಲ್ಲವಿ ಡಿ. ಎಸ್ ಪ್ರಮಾಣವಚನ ಸ್ವೀಕರಿಸಿದರು. ವೇದಿಕೆಯಲ್ಲಿ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಚಾರ್ಯರಾದ ಶ್ರೀ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀಲತಾ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿ ಸಂಘದ ಸಂಯೋಜಕರಾದ ರಾಜೇಶ್ ಎನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ಸಂಯೋಜಕ ಶ್ರೀಮತಿ ಏಲಿಕುಟ್ಟಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ವೇದಾವತಿ ಕಾರ್ಯಕ್ರಮ ನಿರ್ವಹಿಸಿದರು.