ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎಂಟು ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಲೆಮಾಡಿ ಚರಂಡಿಗೆಸೆದ ಕಿಡಿಗೇಡಿಗಳು ➤ ಕರಾವಳಿಯನ್ನೇ ಬೆಚ್ಚಿಬೀಳಿಸುವ ಘಟನೆ – News Kadaba

ಎಂಟು ವರ್ಷದ ಮಗುವನ್ನು ಅತ್ಯಾಚಾರವೆಸಗಿ ಕೊಲೆಮಾಡಿ ಚರಂಡಿಗೆಸೆದ ಕಿಡಿಗೇಡಿಗಳು ➤ ಕರಾವಳಿಯನ್ನೇ ಬೆಚ್ಚಿಬೀಳಿಸುವ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೋರ್ವರ ಎಂಟು ವರ್ಷದ ಮಗುವೊಂದನ್ನು ಅತ್ಯಾಚಾರಗೈದು ಕೊಲೆಮಾಡಿ ಚರಂಡಿಗೆಸೆದು ಹೋದ ಘಟನೆ ಕಂಕನಾಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ನಡೆದಿದೆ.


ಜಾರ್ಖಂಡ್ ಮೂಲದ ಕಾರ್ಮಿಕರು ಟೈಲ್ಸ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಇದರಲ್ಲಿ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆಯ ವೇಳೆಗೆ ಅಲ್ಲೇ ಪಕ್ಕದ ಚರಂಡಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕಂಕನಾಡಿ ಗ್ರಾಮಾಂತರ ಪೊಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ ಸುಮಾರು 30ರಷ್ಟು ಜನ ಕೆಲಸ ಮಾಡುತ್ತಿದ್ದು, ಇಂದು ಭಾನುವಾರ ಆಗಿದ್ದರಿಂದ 19 ಜನ ಮಾತ್ರ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ. ಅತ್ಯಾಚಾರ ನಡೆದಿದೆಯೇ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆಯ ಮಾಡಿದ ನಂತರ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.

 

 

Scroll to Top