ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.


ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತೆರಳಿ ತಿಳಿಸಿ ಬಿಜೆಪಿ ಗೆಲ್ಲಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

Also Read  ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.!


ಬಿಜೆಪಿ ಸುಳ್ಯ ಮಂಡಲ ಬಿಜೆಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ಮುಖಂಡರಾದ ಪ್ರಕಾಶ್ ಹೆಗ್ಡೆ ಮೊದಲಾದವರು ಇದ್ದರು. ಕಡಬ ಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಕಾಶ್ ಎನ್ ಕೆ ವಂದಿಸಿದರು.

error: Content is protected !!
Scroll to Top