(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 22. ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದ.ಕ, ಉಡುಪಿ ಜಿಲ್ಲೆಗಳಿಂದ ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಆರಿಸಿ ಕಳುಹಿಸುವ ಚುನಾವಣೆಗೆ ಎಸ್ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರನ್ನು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಘೋಷಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಶಾಫಿ ಬೆಳ್ಳಾರೆಯವರು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.