ನೂಜಿಬಾಳ್ತಿಲ: ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ನ. 22. ತಾಲೂಕಿನ ನೂಜಿಬಾಳ್ತಿಲ ಬೆಥನಿ ಪ್ರೌಢಶಾಲೆಯಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಶಾಲಾ ಮಕ್ಕಳಿಗಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಜೊತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಥಾ ಹಮ್ಮಿಕೊಂಡು ಸಾರ್ವಜನಿಕರಿಗೆ ನೀರಿನ ಮಹತ್ವದ ಕುರಿತು ಮಾಹಿತಿ ನೀಡಲಾಯಿತು ಹಾಗೂ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಆಧರಿಸಿ ಪ್ರಬಂಧ, ಚರ್ಚಾಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಥನಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಪಿಯು ವಿಭಾಗದ ಪ್ರಾಂಶುಪಾಲರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಶಾಲೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Also Read  What Is a Board Room Review?

error: Content is protected !!
Scroll to Top