ಕುಂತೂರು: ಮಾರ್-ಇವಾನಿಯೋಸ್ ಕಾಲೇಜಿನಲ್ಲಿ ‘ಕನಕ ಜಯಂತಿ’ ಆಚರಣೆ

(ನ್ಯೂಸ್ ಕಡಬ) newskadaba.com ಕುಂತೂರು, ನ. 22. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.


ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಕು| ಲಿಖಿತಾ ಎಂ. ಬಿ ಮತ್ತು ಸಿ| ಜ್ಯುಬಿಲಿ ಥೋಮಸ್ ಮೇರಿ ಅವರು ಕನಕದಾಸ ಜೀವನ ಮತ್ತು ಸಾಧನೆಗಳ ಕುರಿತು ಸಂಕ್ಷಿಪ್ತವಾಗಿ ವರ್ಣಿಸಿ ಮಾತನಾಡಿದರು. “ಭಕ್ತ ಕನಕದಾಸ” ಎನ್ನುವ ಕಿರು ನಾಟಕವನ್ನು ಪ್ರದರ್ಶಿಸಿದರು ಮತ್ತು ನೃತ್ಯ ಹಾಗೂ ದಾಸರ ಕೀರ್ತನೆಗಳನ್ನು ಹಾಡಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನಕ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮ ಸಂಯೋಜಕಿ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಎ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು| ಹರ್ಷಿತಾ ಕೆ, ಸಾಂಸ್ಕೃತಿಕ ಕಾರ್ಯದರ್ಶಿ ಕು| ರಮ್ಯ ಎಲ್ ಬಿಜು, ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಬಿ.ಇಡಿ ಪ್ರಶಿಕ್ಷಣಾರ್ಥಿ ಮನೀಷಾ ಸ್ವಾಗತಿಸಿ, ಪವಿತ್ರ ವಂದಿಸಿದರು. ಕು| ಐಡಾ ಸೆಬಸ್ಟಿಯನ್ ಮತ್ತು ಕು| ಪ್ರಕೃತಿ ಬಿ. ಜಿ ಕಾರ್ಯಕ್ರಮ ನಿರೂಪಿಸಿದರು.

Also Read  ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ

 

 

error: Content is protected !!
Scroll to Top