ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಪದಾಧಿಕಾರಿಯೋರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಈ ಕುರಿತು ಪಾಲಕ್ಕಾಡ್‌ನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಆರ್ ವಿಶ್ವನಾಥ್ ಮಾಹಿತಿ ನೀಡಿದ್ದು, ಜಿಲ್ಲೆಯ ಮಂಬುರಂನಲ್ಲಿ ನಡೆದ ಸಂಜಿತ್ ಹತ್ಯೆಯಲ್ಲಿ ಬಂಧಿತ ಪಿಎಫ್ ಐ ಕಾರ್ಯಕರ್ತ ನೇರವಾಗಿ ಭಾಗಿಯಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಅವರ ಗುರುತನ್ನು ಬಹಿರಂಗಪಡಿಸಿಲ್ಲ. ಸಂಜತ್ ರವರು ನ. 15 ರಂದು ಸಂಜಿತ್ (27) ತನ್ನ ಪತ್ನಿಯನ್ನು ಆಕೆಯ ಕೆಲಸದ ಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Also Read  ➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ

\

error: Content is protected !!
Scroll to Top