ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಾರಿ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆ ಸಮೀಪದ ಮೋರಿಯಲ್ಲಿ ಎಂಟು ವರ್ಷ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು, ಉತ್ತರ ಭಾರತದ 20ಕ್ಕೂ ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.


ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದು, ಈ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರಬಹುದು ಎನ್ನಲಾಗಿದೆ. ಕಾರ್ಖಾನೆಯನ್ನು ಕೇರಳ ಮೂಲದ ವ್ಯಕ್ತಿಗಳು ನಡೆಸುತ್ತಿದ್ದು ಇಲ್ಲಿ ಸುಮಾರು 25 ಮಂದಿ ದುಡಿಯುತ್ತಿದ್ದಾರೆ. ಭಾನುವಾರದಂದು ಸಂಜೆ 6 ಗಂಟೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ. ಮಾತ್ರವಲ್ಲದೇ ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

Scroll to Top