ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 23. ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕುಂಬಳೆ ಆರಿಕ್ಕಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಗಾಯಗೊಂಡವರನ್ನು ಬಂದ್ಯೋಡಿನ ಮುಹಮ್ಮದ್ ಶರೀಫ್(32), ಸಾನಿಯಾ (25), ಆಯಿಷಾ (55), ಇಸಾನ್ (4), ಶೈಸೀನ್ (4), ಲಾಸಿನ್ (2) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಳು ಸಾಗಾಟದ ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭಭವಿಸಿ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ ಎನ್ನಲಾಗಿದೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಒಂದು ಗಂಟೆಗೂ ಅಧಿಕ ಸಮಯ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಕುರಿತು ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪ್ರತೀ ವರ್ಷ ನಡೆಯುತ್ತಿದ್ದ ಗಣರಾಜ್ಯೋತ್ಸವ ದಿನದ ಫಲಪುಷ್ಪ ಪ್ರದರ್ಶನ ರದ್ದು

error: Content is protected !!
Scroll to Top