ದ.ಕ. ವಿಧಾನ ಪರಿಷತ್ ಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ದ.ಕ. ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.‌ ಅವರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಾಮನಾಥ ರೈ , ಮಾಜಿ ಶಾಸಕಿ ಶಕುಂತಲಾ ಶೆಟ್ಟಿ , ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್ ಹಾಗೂ ಇತರ ಮುಖಂಡರು ಈ ಭಾಗಿಯಾಗಿದ್ದರು.

 

Scroll to Top