ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸುಳ್ಯದ ಮಹಿಳೆಗೆ ಲಕ್ಷಾಂತರ ರೂ. ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲು



(ನ್ಯೂಸ್ ಕಡಬ) newskadaba.com ಸುಳ್ಯ, ನ. 23. ದೂರವಾಣಿ ಮೂಲಕ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.








ನೆಲ್ಲೂರು ಕೆಮ್ರಾಜೆ ನಿವಾಸಿ ಪೂರ್ಣಿಮಾ ಎಂಬವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೋರ್ವರು ಕರೆಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅವರಿಂದ 4,31,500 ರೂ. ಗಳನ್ನು ಪಡೆದು, ಉದ್ಯೋಗ ನೀಡದೇ ವಂಚಿಸಿದ್ದಾರೆ. ಈ ಕುರಿತು ವಂಚಿತರಾದ ಮಹಿಳೆ ಉಡುಪಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.






 

error: Content is protected !!
Scroll to Top