ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಆತ್ಮಹತ್ಯೆ ➤ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಕ್ಯಾಂಪಸ್ ಫ್ರಂಟ್ ಆಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ, ನ. 24. ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯಾದ ವಿದ್ಯೋದಯ ಸಾರ್ವಜನಿಕ ಶಾಲೆಯಲ್ಲಿ ಕೆಲಸದ ಒತ್ತಡದಿಂದಾಗಿ ಅಸಹಾಯಕರಾಗಿ ಏನೂ ದಾರಿ ತೋಚದೆ ಶಿಕ್ಷಕಿಯು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.


ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಪ್ರಭಾವಕ್ಕೆ ಮಣಿಯದೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು. ಅದೇ ರೀತಿ ಇನ್ನು ಮುಂದೆ ಶಿಕ್ಷಕರಿಗೆ ಒತ್ತಡ ಹೇರದಿರಲು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋವಿಡ್ ಹಿನ್ನೆಲೆಯಲ್ಲಿ ಬಹುತೇಕವಾಗಿ ನಡೆಯುವಂತಹ ತರಗತಿಗಳಲ್ಲಿ ಹೆಚ್ಚಿನ ಪಠ್ಯಕ್ರಮವನ್ನು ಮುಗಿಸುವ ನೆಪದಲ್ಲಿ ಶಿಕ್ಷಣ ಸಂಸ್ಥೆಗಳು ಶಿಕ್ಷಕಿಯರ ಮೇಲೆ ಒತ್ತಡ ಹಾಕುವುದರಿಂದ ಶಿಕ್ಷಕಿಯರು ಮಾನಸಿಕ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇದರಿಂದಾಗಿ ಇಂತಹ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದೆ. ಈ ಆತ್ಮಹತ್ಯೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಆಸೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  RSS ಕಾರ್ಯಕರ್ತನಿಗೆ ಚೂರಿ ಇರಿದಾಗ ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕ ►ಮಾನವೀಯತೆಯ ಮೂಲಕ ಹೀರೋ ಆದ ಬಂಟ್ವಾಳದ ಯುವಕ

error: Content is protected !!
Scroll to Top