ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24. ಸ್ಕೂಟರ್ ಹಾಗೂ ಬೈಕ್ ನಡುವೆ ಪರಸ್ಪರ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ.

ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾದರೆ, ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೋಲಿಸರು‌ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Scroll to Top