ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನ.04 ಶನಿವಾರದಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಲಿದ್ದಾರೆ.

ನಗರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಂದು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ತದನಂತರ ಅವರು ಬೇರೆ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಿಂತಿರುಗಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

Scroll to Top