ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ➤ ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಮಂಗಳೂರು, ನ. 25.‌ ಫುಟ್ ಪಾತ್ ಮೇಲೆ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಕಾರೊಂದು ಹರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಫುಟ್ ಪಾತ್ ನಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ.








ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ರಾತ್ರಿ ಮಲಗಿದ್ದು, ಬೆಳಗ್ಗೆ ಇಲ್ಲಿನ ರಸ್ತೆಯಲ್ಲೇ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ಅಲ್ಲದೇ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೂ ಚಲಿಸಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು, ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.






 

error: Content is protected !!
Scroll to Top