ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯು ವಿದ್ಯಾರ್ಥಿ



(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ನ. 25. ರೈಲಿನಡಿಗೆ ತಲೆ ಕೊಟ್ಟು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.








ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಶಾಲ ಗೌಡ (17) ಎಂದು ಗುರುತಿಸಲಾಗಿದೆ. ಮುಗ್ವಾ ಹಳಗೇರಿ ಮೂಲದ ನಿವಾಸಿಯಾದ ಈತ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದು, ಚಲಿಸುವ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ದೇಹ ಛಿದ್ರ ಛಿದ್ರವಾಗಿತ್ತು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top