ಜಿಲ್ಲಾಧಿಕಾರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಗೆ ಬೆದರಿಕೆ ಹಾಕಿದ ಕೋಮುವಾದಿಗಳ ಬಂಧನಕ್ಕೆ ಆಗ್ರಹ ➤ ಪಿಎಫ್ಐ ಮಡಂತ್ಯಾರು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 27. ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾ ಕೃಷ್ಣ ಅಡ್ಯಂತಾಯ ಪತ್ರಿಕಾಗೋಷ್ಠಿಯೊಂದರಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ ಐ ಸೌಮ್ಯ, ಇವರ ಕಾಲು ಮುರಿಯುತ್ತೇವೆ ಮತ್ತು ಕಾರಿಂಜದಲ್ಲಿ ಪ್ರಚೋದನಕಾರಿ ಭಾಷಣಕಾರ ಹಿಂದೂ ಜಾಗರಣಾ ವೇದಿಕೆಯ ಜಗದೀಶ್ ಕಾರಂತ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎಂಬ ಬೆದರಿಕೆ ಹೇಳಿಕೆಗಳ ವಿರುದ್ಧ ಪುಂಜಾಲಕಟ್ಟೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರು ಡಿವಿಷನ್ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಹನೀಫ್ ಟಿ.ಎಸ್ ಭಾಷಣವನ್ನು ಮಾಡಿದರು. ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಮುಸ್ತಫಾ ಜಿ.ಕೆ, ಮಡಂತ್ಯಾರು ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ.ಎಮ್, ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Also Read  ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ರುಂಡ ಕತ್ತರಿಸಿದ ದುಷ್ಕರ್ಮಿಗಳು

 

error: Content is protected !!
Scroll to Top